ಕೇಂದ್ರ ಸಚಿವ ಅನಂತ್ ಕುಮಾರ್ ಇನ್ನಿಲ್ಲ. - News Ubaar

ಇತ್ತೀಚಿನ ಸುದ್ದಿ

Subscribe

ಭಾನುವಾರ, ನವೆಂಬರ್ 11, 2018

ಕೇಂದ್ರ ಸಚಿವ ಅನಂತ್ ಕುಮಾರ್ ಇನ್ನಿಲ್ಲ.

Karnataka politician, Union minister Ananth Kumar no more
ಟ್ರೂ ಮೀಡಿಯಾ ನ್ಯೂಸ್,ನ.12:
ಬೆಂಗಳೂರು : ಕರ್ನಾಟಕದ ಜನಪ್ರಿಯ ರಾಜಕಾರಣಿ, ಕೇಂದ್ರ ಸಚಿವ, ಬಿಜೆಪಿಯ ಪ್ರಮುಖ ನಾಯಕ ಅನಂತ್ ಕುಮಾರ್ (59) ಅವರು ನವೆಂಬರ್ 12ರ ಬೆಳಗಿನ ಜಾವ ವಿಧಿವಶರಾಗಿದ್ದಾರೆ.
ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು, ಕಡೆಯ ಹಂತದಲ್ಲಿ ಲಂಡನ್ನಿಗೆ ಹೋಗಿ ಚಿಕಿತ್ಸೆ ಪಡೆದು, ಸಾಕಷ್ಟು ಹೋರಾಟ ನಡೆಸಿದರೂ ಗೆಲ್ಲಲು ಸಾಧ್ಯವಾಗಲೇ ಇಲ್ಲ. ಸೋಮವಾರ ಬೆಳಗಿನ ಜಾವ 3 ಗಂಟೆಯ ಸುಮಾರಿಗೆ ಅವರು ಕೊನೆಯುಸಿರೆಳೆದರು.
ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ, ಹಾಗು ಸಂಸದೀಯ ವ್ಯವಹಾರಗಳ ಖಾತೆಯ ಸಚಿವರಾಗಿದ್ದ ಅವರು ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಿಂದ ಗೆದ್ದಿದ್ದರು. ಅವರು ಪತ್ನಿ ಡಾ. ತೇಜಸ್ವಿನಿ, ಮಕ್ಕಳಾದ ಐಶ್ವರ್ಯ, ವಿಜೇತಾ ಮತ್ತು ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

Pages