ಕರ್ನಾಟಕದಲ್ಲಿ ‘ಕೊರೋನಾ’ ಹಿನ್ನೆಲೆ 3 ಜಿಲ್ಲೆಗಳಲ್ಲಿ ಎಲ್‌ಕೆಜಿ, ಯುಕೆಜಿಗೆ ಅನಿರ್ದಿಷ್ಟಾವಧಿ ರಜೆ ಘೋಷಣೆ - News Ubaar

ಇತ್ತೀಚಿನ ಸುದ್ದಿ

Subscribe

ಭಾನುವಾರ, ಮಾರ್ಚ್ 8, 2020

ಕರ್ನಾಟಕದಲ್ಲಿ ‘ಕೊರೋನಾ’ ಹಿನ್ನೆಲೆ 3 ಜಿಲ್ಲೆಗಳಲ್ಲಿ ಎಲ್‌ಕೆಜಿ, ಯುಕೆಜಿಗೆ ಅನಿರ್ದಿಷ್ಟಾವಧಿ ರಜೆ ಘೋಷಣೆ

ಮಾ.09. ಚೀನಾದಿಂದ ಆರಂಭಗೊಂಡ ಮಹಾಮಾರಿ ಕೊರೋನಾ ವೈರಸ್ ರಾಜ್ಯಕ್ಕೂ ಕಾಲಿಟ್ಟ ಭೀತಿಯಲ್ಲಿ ರಾಜ್ಯದ ಕೆಲವೆಡೆ ನರ್ಸರಿ, ಎಲ್‌ಕೆಜಿ, ಯುಕೆಜಿ ತರಗತಿಗಳಿಗೆ ಇಂದಿನಿಂದ ಮುಂದಿನ ಆದೇಶದವರೆಗೆ ರಜೆ ಘೋಷಿಸಿ ಸರ್ಕಾರ ಆದೇಶಿಸಿದೆ.
ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಸರ್ಕಾರಿ ಮತ್ತು ಖಾಸಗಿ ಶಾಲೆಗಳ ನರ್ಸರಿ, ಎಲ್‌ಕೆಜಿ, ಹಾಗೂ ಯುಕೆಜಿ ತರಗತಿಗಳಿಗೆ ಮುಂಜಾಗ್ರತಾ ಕ್ರಮವಾಗಿ ಮುಂದಿನ ಆದೇಶದವರೆಗೆ ರಜಾ ಗೋಷಣೆ ಮಾಡಲಾಗಿದೆ. ಆರೋಗ್ಯ ಆಯುಕ್ತರ ಸಲಹೆಯ ಮೇರೆಗೆ ಬೆಂಗಳೂರು ಉತ್ತರ, ದಕ್ಷಿಣ ಮತ್ತು ಗ್ರಾಮಾಂತರ ಜಿಲ್ಲೆಗಳ ನರ್ಸರಿ, ಎಲ್ಕೆಜಿ, ಯುಕೆಜಿ ಶಾಲೆಗಳಿಗೆ ನಾಳೆಯಿಂದ ರಜೆ ಘೋಷಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಟ್ವೀಟ್ ಮಾಡಿದ್ದಾರೆ.

Pages