ಮಂಗಳೂರಿಗೂ ತಟ್ಟಿದ ಕೊರೋನಾ ಭೀತಿ : ದುಬೈನಿಂದ ಆಗಮಿಸಿದ ಪ್ರಯಾಣಿಕನಲ್ಲಿ ಕೊರೋನಾ ಶಂಕೆ - News Ubaar

ಇತ್ತೀಚಿನ ಸುದ್ದಿ

Subscribe

ಭಾನುವಾರ, ಮಾರ್ಚ್ 8, 2020

ಮಂಗಳೂರಿಗೂ ತಟ್ಟಿದ ಕೊರೋನಾ ಭೀತಿ : ದುಬೈನಿಂದ ಆಗಮಿಸಿದ ಪ್ರಯಾಣಿಕನಲ್ಲಿ ಕೊರೋನಾ ಶಂಕೆ

ಮಂಗಳೂರು, ಮಾ.8: ಮಹಾಮಾರಿ ಕೊರೋನ ಸೋಂಕು ವಿಶ್ವಾದ್ಯಂತ ಲಕ್ಷಾಂತರ ಜನರಿಗೆ ತಗುಲಿ ಸಾವಿರಾರು ನಾಗರಿಕರ ಮಾರಣಹೋಮಕ್ಕೆ ಕಾರಣವಾಗಿದೆ. ಈ ನಡುವೆ ಮಂಗಳೂರಿನಲ್ಲಿ ಪ್ರಯಾಣಿಕರೊಬ್ಬರಿಗೆ ಕೊರೋನ ಸೋಂಕು ತಗುಲಿದ ಶಂಕೆ ಹಿನ್ನೆಲೆಯಲ್ಲಿ ನಗರದ ವೆನ್ಲಾಕ್ ಆಸ್ಪತ್ರೆಗೆ ರವಿವಾರ ದಾಖಲಿಸಲಾಗಿದೆ.
ಆಸ್ಪತ್ರೆಗೆ ದಾಖಲಿಸಿರುವ ವ್ಯಕ್ತಿಯ ಹೆಸರನ್ನು ಆರೋಗ್ಯಾಧಿಕಾರಿಗಳು ಬಹಿರಂಗಪಡಿಸಲು ನಿರಾಕರಿಸಿದ್ದಾರೆ. ಬಜ್ಪೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಎಲ್ಲ ಪ್ರಯಾಣಿಕರನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಈ ಸಂದರ್ಭ ದುಬೈನಿಂದ ಆಗಮಿಸಿದ ಪ್ರಯಾಣಿಕನಲ್ಲಿ ಜ್ವರದ ಲಕ್ಷಣ ಕಂಡುಬಂದ ಹಿನ್ನೆಲೆಯಲ್ಲಿ ಆತನನ್ನು ವೆನ್ಲಾಕ್ ಆಸ್ಪತ್ರೆಯ ವಿಶೇಷ ಘಟಕಕ್ಕೆ ದಾಖಲಿಸಲಾಗಿದೆ.

Pages