ನ್ಯೂಸ್ ಉಪ್ಪಿನಂಗಡಿ: ಜನವರಿ 1ರಿಂದ ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಆರಂಭವಾಗಲಿದೆ. ಈ ವಿಚಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಜೊತೆಗೆ ಇಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಶಾಲೆ ಆರಂಭದ ಬಗ್ಗೆ ಚರ್ಚಿಸುತ್ತೇವೆ ಎಂದು ಅವರು ಹೇಳಿದರು. ಜನವರಿ 1ರಿಂದ 6-9ನೇ ತರಗತಿವರೆಗೂ ವಿದ್ಯಾಗಮ ತರಗತಿ ಕೂಡ ಆರಂಭವಾಗಲಿದ್ದು, ಜ.1ರಿಂದ ಎಸ್.ಎಸ್.ಎಲ್.ಸಿ, ಪ್ರಥಮ ಹಾಗೂ ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗಲಿದೆ ಎಂದು ಹೇಳಿದರು.