ಉಪ್ಪಿನಂಗಡಿ:ಡಿ.28,ಹಿರೇಬಂಡಾಡಿ ಗ್ರಾಮ ಪಂಚಾಯತ್‌ನ ಹಿರೇಬಂಡಾಡಿ ಸರಕಾರಿ ಹಿ.ಪ್ರಾ.ಶಾಲೆಯ ಮತಗಟ್ಟೆಯ ಹೊರಗಡೆ ಅಭ್ಯರ್ಥಿಗಳ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆದ ಘಟನೆ ನಡೆದಿದೆ.
ಮತಗಟ್ಟೆಯ ಹೊರಗಡೆ ಎರಡು ಪಕ್ಷಗಳ ಬೆಂಬಲಿತ ಅಭ್ಯರ್ಥಿಗಳ ಬೆಂಬಲಿಗರು ಮತ ಚಲಾವಣೆಗೆ ಬರುತ್ತಿದ್ದ ಮತದಾರರ ಮನವೊಲಿಕೆ ನಡೆಸುತ್ತಿದ್ದು ಇದೇ ವಿಚಾರಕ್ಕೆ ಸಂಬಂಧಿಸಿ ಎರಡು ಗುಂಪಿನ ನಡುವೆ ಮಾತಿನ ಚಕಮಕಿ ನಡೆದಿದೆ. ಎರಡು ಗುಂಪಿನ ಬೆಂಬಲಿಗರು ರಸ್ತೆಯಲ್ಲಿಯೇ ಜಮಾಯಿಸಿ ಪರಸ್ಪರ ಮಾತಿನ ಚಕಮಕಿ ನಡೆಸಿದರು. ಇದರಿಂದಾಗಿ ಸ್ಥಳದಲ್ಲಿ ತುಸು ಬಿಗುವಿನ ವಾತಾರಣವೂ ನಿರ್ಮಾಣಗೊಂಡಿತು. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಚುನಾವಣಾ ಕರ್ತವ್ಯ ನಿರತ ಪೊಲೀಸರು ಹಾಗೂ ಘಟನೆ ಕುರಿತು ಮಾಹಿತಿ ಪಡೆದುಕೊಂಡು ಸ್ಥಳಕ್ಕೆ ಆಗಮಿಸಿದ ಉಪ್ಪಿನಂಗಡಿ ಪೊಲೀಸರು ಗುಂಪುಗಳನ್ನು ಚದುರಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಹಿರೇಬಂಡಾಡಿ ಗ್ರಾ.ಪಂ.ವ್ಯಾಪ್ತಿಯಲ್ಲಿ ಬಿರುಸಿನ ಮತದಾನ ನಡೆದಿದೆ.