6 ವರ್ಷದ ಬಾಲಕಿಯನ್ನು ಅತ್ಯಾಚಾರವೆಸಗಿ ಹತ್ಯೆಗೈದಿದ್ದ ಆರೋಪಿ ಶವವಾಗಿ ಪತ್ತೆ - News Ubaar

ಇತ್ತೀಚಿನ ಸುದ್ದಿ

Subscribe

ಗುರುವಾರ, ಸೆಪ್ಟೆಂಬರ್ 16, 2021

6 ವರ್ಷದ ಬಾಲಕಿಯನ್ನು ಅತ್ಯಾಚಾರವೆಸಗಿ ಹತ್ಯೆಗೈದಿದ್ದ ಆರೋಪಿ ಶವವಾಗಿ ಪತ್ತೆ

ನ್ಯೂಸ್ ಉಬಾರ್:
ಹೈದರಾಬಾದ್ ಸೆ 6 ರಂದು 6 ವರ್ಷದ ಬಾಲಕಿಯನ್ನು ಅತ್ಯಾಚಾರಮಾಡಿ ಹತ್ಯೆ ಮಾಡಿದ್ದ ಆರೋಪಿ ಇಂದು ರೆಲೈ ಹಳಿಯ ಮೇಲೆ ಶವವಾಗಿ ಪತ್ತೆಯಾಗಿದ್ದಾನೆ. 

ಸೈದಾಬಾದ್‌ನಲ್ಲಿ 6 ವರ್ಷದ ಬಾಲಕಿಯನ್ನು ನೆರೆಮನೆಯ ವ್ಯಕ್ತಿಯೊಬ್ಬ ಅತ್ಯಾಚಾರ ಮಾಡಿ ಕೊಂದು ಪರಾರಿಯಾಗಿದ್ದ ಘಟನೆ ದೇಶದಾದ್ಯಂತ ದೊಡ್ಡ ಮಟ್ಟದ ಆಕ್ರೋಶಕ್ಕೆ ಕಾರಣವಾಗಿತ್ತು

 ಆರೋಪಿ 30 ವರ್ಷದ ರಾಜು ಘಟನೆ ವರದಿಯಾದಾಗಿನಿಂದ ತಲೆಮರೆಸಿಕೊಂಡಿದ್ದ. ಆತನನ್ನು ಬಂಧಿಸಲು ಪೊಲೀಸರು ಒಂಬತ್ತು ವಿಶೇಷ ತಂಡಗಳನ್ನು ರಚಿಸಿದ್ದರು. ಸೆಪ್ಟೆಂಬರ್ 14 ರಂದು, ಹೈದರಾಬಾದ್ ಪೊಲೀಸರು ಸಾರ್ವಜನಿಕರಿಗೆ ಆರೋಪಿಯ ದೈಹಿಕ ನೋಟದ ವಿವರಗಳೊಂದಿಗೆ ನೋಟಿಸ್ ನೀಡಿದ್ದರು ಮತ್ತು ಆತನ ಬಗ್ಗೆ ಮಾಹಿತಿ ಇರುವ ಯಾರಾದರೂ ಪೊಲೀಸರ ಮುಂದೆ ಬರುವಂತೆ ಮನವಿ ಮಾಡಿದರು, ಜೊತೆಗೆ ವಿಶ್ವಾಸಾರ್ಹ ಮಾಹಿತಿಗಾಗಿ 10 ಲಕ್ಷ ಬಹುಮಾನವನ್ನೂ ಘೋಷಿಸಿದ್ದರು. ಬಗ್ಗೆ ಮಾತನಾಡಿರುವ ಹೈದರಾಬಾದ್ ಪೂರ್ವ ವಲಯದ ಉಪ ಪೊಲೀಸ್ ಆಯುಕ್ತರು ರಮೇಶ್, ಆರೋಪಿ ಸಾವನ್ನಪ್ಪಿರುವುದು ನಿಜ. ನಾನು ಸಂಬಂಧಪಟ್ಟ ಪೊಲೀಸ್ ಸಿಬ್ಬಂದಿಯೊಂದಿಗೆ ಹೆಚ್ಚಿನ ವಿವರಗಳನ್ನು ಖಚಿತಪಡಿಸಿಕೊಳ್ಳಬೇಕು. ರೈಲಿನಲ್ಲಿ ಪರಾರಿಯಾಗುವ ವೇಳೆ ಪೊಲೀಸರು ತನನ್ನು ಹಿಂಬಾಲಿಸುತ್ತಿದ್ದಾರೆ ಎಂಬ ವಿಚಾರ ತಿಳಿದು ತಪ್ಪಿಸಿಕೊಳ್ಳುವ ಸಲುವಾಗಿ ಆರೋಪಿ ರೈಲಿನಿಂದ ಹಾರಿದ್ದಾನೆ ಎಂದು ಹೇಳಲಾಗಿದೆ. ಆದರೆ, ಈ ಎಲ್ಲಾ ವಿವರಗಳನ್ನು ಮತ್ತಷ್ಟು ಖಚಿತಪಡಿಸಿಕೊಂಡ ನಂತರ ಮಾಧ್ಯಮದ ಜೊತೆಗೆ ಇನ್ನಷ್ಟು ಮಾಧ್ಯಮಗಳನ್ನು ಹಂಚಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಇದೇ ವಿಚಾರವಾಗಿ ಮಾತನಾಡಿದ್ದ ತೆಲಂಗಾಣ ಗೃಹ ಸಚಿವರು ಆರೋಪಿಯನ್ನು ಎನ್ಕೌಂಟರ್ ಮಾಡುವುದಾಗಿ ಎಚ್ಚರಿಕೆ ನೀಡಿದ್ದರು. ಆದರೆ ಇಂದು ಆರೋಪಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Pages