ಪ್ಯಾರಾ ಮೆಡಿಕಲ್, ನರ್ಸಿಂಗ್ ಇನ್ನಿತರ ಉದ್ದೇಶಕ್ಕಾಗಿ ಕೇರಳದಿಂದ ಜಿಲ್ಲೆಗೆ ಬರುವ ವಿದ್ಯಾರ್ಥಿಗಳು ಅಕ್ಟೋಬರ್ ಅಂತ್ಯದ ವರೆಗೆ ಮಂಗಳೂರಿಗೆ ಬಾರದಂತೆ ಆಯಾ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದ್ದಾರೆ. ಅಲ್ಲದೆ, ಕೇರಳಕ್ಕೆ ತೆರಳುವವರು ಕೂಡಾ ತಮ್ಮ ಪ್ರಯಾಣವನ್ನು ಅಕ್ಟೋಬರ್ ಅಂತ್ಯದ ವರೆಗೆ ಮುಂದೂಡುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ಅದಲ್ಲದೇ ಆಸ್ಪತ್ರೆಗಳು, ನರ್ಸಿಂಗ್ ಹೋಮ್ ಗಳು, ಕಚೇರಿಗಳು, ಹೊಟೇಲ್ ಗಳು, ಕೈಗಾರಿಕೆಗಳು ಸೇರಿದಂತೆ ಎಲ್ಲಾ ರೀತಿಯ ಉದ್ಯೋಗದಾತರು ತಮ್ಮ ಕೇರಳ ಮೂಲದ ಸಿಬ್ಬಂದಿಗಳನ್ನು ಯಾವುದೇ ಕಾರಣಕ್ಕೂ ಕರ್ನಾಟಕ ಪ್ರವೇಶ ಮಾಡದಂತೆ ಸೂಚಿಸಿದ್ದಾರೆ. ಕೇರಳಕ್ಕೆ ಪ್ರಯಾಣಿಸದಂತೆ ನಿರ್ಬಂಧ ವಿಧಿಸಲು ಕೈಗಾರಿಕೆ ಇನ್ನಿತರ ಕಂಪನಿಗಳ ಮಾಲಕರಿಗೆ ಸೂಚಿಸಿದ್ದಾರೆ.
ಅದೇ ರೀತಿ, ಸಾರ್ವಜನಿಕರು ಯಾವುದೇ ತುರ್ತು ಕಾರಣಗಳಿಲ್ಲದೇ ಇದ್ದಲ್ಲಿ ಅಕ್ಟೋಬರ್ ಕೊನೆಯವರೆಗೆ ಕೇರಳ ರಾಜ್ಯಕ್ಕೆ ಪ್ರಯಾಣಿಸಬಾರದು ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ಸೂಚಿಸಿದ್ದಾರೆ