ಕಾಂಗ್ರೆಸ್ ಮುಖಂಡ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ನಿಧನ - News Ubaar

ಇತ್ತೀಚಿನ ಸುದ್ದಿ

Subscribe

ಸೋಮವಾರ, ಸೆಪ್ಟೆಂಬರ್ 13, 2021

ಕಾಂಗ್ರೆಸ್ ಮುಖಂಡ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ನಿಧನ

ನ್ಯೂಸ್ ಉಬಾರ್:
ಮಾಜಿ ಕೇಂದ್ರ ಸಚಿವ, ಹಾಲಿ ರಾಜ್ಯಸಭಾ ಸದಸ್ಯ ಮತ್ತು ಪ್ರಭಾವಿ ಕಾಂಗ್ರೆಸ್ ಮುಖಂಡ ಆಸ್ಕರ್ ಫೆರ್ನಾಂಡಿಸ್ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. 

ಅವರಿಗೆ 80 ವರ್ಷ ವಯಸ್ಸಾಗಿತ್ತು. ಕಳೆದ ಹಲವು ದಿನಗಳಿಂದ ಮಂಗಳೂರಿನ ಯೇನಪೊಯ ಆಸ್ಪತ್ರೆಯಲ್ಲಿ ಚಿಂತಾಜನಕ ಸ್ಥಿತಿಯಲ್ಲಿದ್ದ ಆಸ್ಕರ್ ಫೆರ್ನಾಂಡಿಸ್, ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನ ಹೊಂದಿದರು. ಗಾಂಧಿ ಕುಟುಂಬದ ಆಪ್ತರಾಗಿದ್ದ ಇವರು, ಕಾಂಗ್ರೆಸ್ ಪಕ್ಷದ ಹಿರಿಯ ಮತ್ತು ಪ್ರಭಾವಿ ನಾಯಕರಲ್ಲಿ ಓರ್ವರಾಗಿದ್ದರು.

ಉಡುಪಿಯಿಂದ ರಾಜಕೀಯ ಜೀವನವನ್ನು ಆರಂಭಿಸಿದ ಅವರು ಬಳಿಕ ಹಂತ ಹಂತವಾಗಿ ಉನ್ನತ ಸ್ಥಾನಕ್ಕೇರಿದ್ದರು. ಆಸ್ಕರ್ ಫೆರ್ನಾಂಡಿಸ್ ಪತ್ನಿ ಬ್ಲೋಸಂ ಫೆರ್ನಾಂಡಿಸ್, ಪುತ್ರ ಓಶಾನ್, ಪುತ್ರಿ ಓಶಾನಿ, ಅಳಿಯ ಮಾರ್ಕ್, ಸೊಸೆ ಫ್ರೆಜಿಲ್ ಮತ್ತು ಕುಟುಂಬಸ್ಥರು ಸಹಿತ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.

Pages