ನ್ಯೂಸ್ ಉಬಾರ್:
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (KMDC) ಅರಿವು ಯೋಜನೆಯಡಿ ವಿದ್ಯಾರ್ಥಿ ಸಾಲ ನವೀಕರಣಗಳನ್ನು ಹಠಾತ್ತನೆ ನಿಲ್ಲಿಸಿದೆ. ಇದರಿಂದ ರಾಜ್ಯದಾದ್ಯಂತ ಅಲ್ಪಸಂಖ್ಯಾತ ಸಮುದಾಯಗಳ ಸಾವಿರಾರು ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಸಂಸ್ಥೆಗಳಿಂದ ಹೊರಗುಳಿಯುವಂತಾಗಿದೆ. ಈ ಬಗ್ಗೆ ದೀ ಹಿಂದೂ ಪತ್ರಿಕೆ ಸೋಮವಾರ ರಿಷಿಕೇಶ್ ಬಹದ್ದೂರ್ ದೇಸಾಯಿ ಅವರ ಮುಖಪುಟ ವರದಿ ಪ್ರಕಟಿಸಿದೆ.
ಕೋವಿಡ್ ಸಾಂಕ್ರಾಮಿಕದ ಕಾರಣದಿಂದ ಅನುದಾನ ಕಡಿಮೆಯಾಗಿರುವುದು ಇದಕ್ಕೆ ಕಾರಣ ಎಂದು ನಿಗಮ ಹೇಳಿದೆ ಎಂದು ವರದಿ ತಿಳಿಸಿದೆ.
ರಾಜ್ಯಾದ್ಯಂತ ಹಲವಾರು ವಿದ್ಯಾರ್ಥಿಗಳು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಪತ್ರ ಬರೆದು ಈ ಯೋಜನೆಯನ್ನು ಸ್ಥಗಿತಗೊಳಿಸುವ ಸರ್ಕಾರಿ ನಿಗಮದ ನಿರ್ಧಾರದ ವಿರುದ್ಧ ದೂರು ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಅವರನ್ನು ಟ್ಯಾಗ್ ಮಾಡುವ ಮೂಲಕ ಕೆಲವು ವಿದ್ಯಾರ್ಥಿಗಳು ಆನ್‌ಲೈನ್ ಅಭಿಯಾನವನ್ನು ಆರಂಭಿಸಿದ್ದಾರೆ ಎಂದು ವರದಿ ತಿಳಿಸಿದೆ.