ನ್ಯೂಸ್ ಉಬಾರ್:
ಉಪ್ಪಿನಂಗಡಿ(29-09-2021): ಕಾರಿನಲ್ಲಿ ಬಂದ ಅಪರಿಚಿತರು ಬಾಲಕನನ್ನು ಅಪಹರಿಸಲು ಯತ್ನಿಸಿರುವ ಘಟನೆ ಉಪ್ಪಿನಂಗಡಿಯ ಮಠ ಎಂಬಲ್ಲಿ ನಡೆದಿದೆ.
ಓಮ್ನಿ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಅಪಹರಣ ವಿಫಲ ಯತ್ನ ಮಾಡಿದ್ದಾರೆ. ಸಿಫಾನ್ ಎಂಬ 14ವರ್ಷದ ಬಾಲಕನನ್ನು ಅಪಹರಿಸಲು ಯತ್ನಿಸಿದ್ದಾರೆ. ಈ ವೇಳೆ ಬಾಲಕ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ.
ಬಾಲಕ ಸಂಜೆ ಬೀಡಿ ಕೊಂಡೊಯ್ಯುತ್ತಿದ್ದಾಗ ಹಿಂಬದಿಯಿಂದ ಬಂದ ಓಮ್ನಿ ಕಾರಿನಲ್ಲಿ ಅಪರಿಚಿತರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಹರಣಕ್ಕೆ ಯತ್ನಿಸಿದ್ದಾರೆ.
ಘಟನೆಯ ವಿವರ:
ಈತ ನಿನ್ನೆ ಸಂಜೆ ಬೀಡಿ ಕೊಡಲೆಂದು ಹಿರ್ತಡ್ಕದಲ್ಲಿರುವ ಬೀಡಿ ಬ್ರಾಂಚ್‌ಗೆ ತೆರಳಿದ್ದು, ಆ ಸಂದರ್ಭ ಉಪ್ಪಿನಂಗಡಿ ಕಡೆಯಿಂದ ನೆಲ್ಯಾಡಿ ಕಡೆಗೆ ತೆರಳುತ್ತಿದ್ದ ಓಮ್ನಿ ಕಾರೊಂದು ಈತನಿಗೆ ಗೊತ್ತಾಗದಂತೆ ಈತನ ಹಿಂಬದಿಯಲ್ಲಿ ಬಂದು ಅದರಲ್ಲಿದ್ದಾತ ಈತನ ಅಂಗಿಯ ಕಾಲರ್ ಹಿಡಿದೆಳೆದಿದ್ದು, ಈ ವೇಳೆ ಸಿಫಾನ್ ಓಡಿ ತಪ್ಪಿಸಿಕೊಂಡು ಅಲ್ಲೇ ಸಮೀಪದಲ್ಲಿರುವ ತನ್ನ ಚಿಕ್ಕಮ್ಮನ ಮನೆಗೆ ಹೋಗಿದ್ದಾನೆ. ಈ ಕಾರು ಕೂಡಾ ಅಲ್ಲಿಂದ ಪರಾರಿಯಾಗಿದೆ ಎಂದು ತಿಳಿದು ಬಂದಿದೆ. ಘಟನೆಯಿಂದಾಗಿ ಬಾಲಕ ಗಾಬರಿಗೊಂಡಿದ್ದು, ಓಮ್ನಿಯಲ್ಲಿ ಎಷ್ಟು ಮಂದಿ ಇದ್ದರು ಎಂಬ ಬಗ್ಗೆ ಆತನ ಗಮನಕ್ಕೆ ಬಂದಿಲ್ಲವೆನ್ನಲಾಗಿದೆ. ಈ ಬಗ್ಗೆ ಆತನ ತಂದೆ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.