ಬೆಳ್ತಂಗಡಿ: ಜನಪ್ರತಿನಿಧಿಗಳ ಫ್ಲೆಕ್ಸ್ ಬ್ಯಾನರ್ ಗಳ ತೆರವಿಗೆ ಯುವ ಕಾಂಗ್ರೆಸ್ ವತಿಯಿಂದ ಮನವಿ. - News Ubaar

ಇತ್ತೀಚಿನ ಸುದ್ದಿ

Subscribe

ಶುಕ್ರವಾರ, ಸೆಪ್ಟೆಂಬರ್ 10, 2021

ಬೆಳ್ತಂಗಡಿ: ಜನಪ್ರತಿನಿಧಿಗಳ ಫ್ಲೆಕ್ಸ್ ಬ್ಯಾನರ್ ಗಳ ತೆರವಿಗೆ ಯುವ ಕಾಂಗ್ರೆಸ್ ವತಿಯಿಂದ ಮನವಿ.

ನ್ಯೂಸ್ ಉಬಾರ್:
ಬೆಳ್ತಂಗಡಿ: ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಫ್ಲೆಕ್ಸ್ ಬ್ಯಾನರ್ ಗಳಲ್ಲಿ ಚುನಾಯಿತ ಜನಪ್ರತಿನಿಧಿಯ ಭಾವಚಿತ್ರಗಳ ಫ್ಲೆಕ್ಸ್ ಬ್ಯಾನರ್ ಗಳನ್ನು ತೆರವುಗೊಳಿಸುವ ಕುರಿತು ನಗರ ಪಂಚಾಯತ್ ಮುಖ್ಯಾಧಿಕಾರಿಗಳಿಗೆ ಹಾಗೂ ತಾಲ್ಲೂಕು ಕಾರ್ಯನಿರ್ವಹಣಾಧಿಕಾರಿಗಳಿಗೆ ಯುವ ಕಾಂಗ್ರೆಸ್ ವತಿಯಿಂದ ಮನವಿ ನೀಡಲಾಯಿತು.
ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶಿಸುವ ಸರ್ಕಾರಿ ಜಾಹೀರಾತುಗಳಲ್ಲಿ ನಾನಾ ಕಾಮಗಾರಿಗಳಿಗೆ ಸಂಬಂಧಿಸಿದ ಫಲಕಗಳಲ್ಲಿ ಜನಪ್ರತಿನಿಧಿಗಳ ಫೋಟೋ ಮತ್ತು ಹೆಸರು ಹಾಕುವಂತಿಲ್ಲ ಎಂದು ಹೈ ಕೋರ್ಟ್ ಹೇಳಿತ್ತು.
ಈ ಸಂದರ್ಭ ಯುವ ಕಾಂಗ್ರೆಸ್ ನಗರ ಅಧ್ಯಕ್ಷ ಅನಿಲ್ ಪೈ, ನಗರ ಯುವ ಇಂಟೆಕ್ ಅಧ್ಯಕ್ಷ ನವೀನ್ ಗೌಡ ,ರಮೀಝ್ ,ಧನುಷ್,ಅಜಯ್ ಮಟ್ಲಾ ಉಪಸ್ಥಿತರಿದ್ದರು.

Pages