ಪಡ್ಯೊಟ್ಟು ನಿವಾಸಿ ಯತೀಶ್ ಶೆಟ್ಟಿ ಎಂಬವರಿಗೆ ಸೇರಿದ ಸುಮಾರು 1 ಎಕ್ರೆ ಪ್ರದೇಶದಲ್ಲಿನ ಅಡಿಕೆ ತೋಟದಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು ಸುಮಾರು 250 ಕ್ಕೂ ಹೆಚ್ಚು ಆಡಿಕೆ ಗಿಡಗಳು ಸುಟ್ಟು ಹೋಗಿದ್ದು ಸಾವಿರಾರು ರೂಪಾಯಿ ನಷ್ಟ ಸಂಭವಿಸಿದೆ.
ಪುತ್ತೂರು ಹಾಗೂ ಬೆಳ್ತಂಗಡಿ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದರೂ ಬೆಂಕಿಯನ್ನು ಹತೋಟಿಗೆ ತರಲು ಅಸಾಧ್ಯವಾಗಿದ್ದು, ಬಳಿಕ ಬಂಟ್ವಾಳ ಅಗ್ನಿಶಾಮಕ ದಳದ ಸಹಕಾರದೊಂದಿಗೆ ನಂದಿಸಲಾಯಿತು.
