ಉಪ್ಪಿನಂಗಡಿ : ಉಪ್ಪಿನಂಗಡಿ ಸಮೀಪದ ಪೆರಿಯಡ್ಕದಲ್ಲಿ ಯುವಕ ತೋಟದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.
ಮೃತಪಟ್ಟವರು ಪೆರಿಯಡ್ಕದ ಕಿಂಡೋವು ಜಿನ್ನಪ್ಪ ಗೌಡ ಅವರ ಪುತ್ರ ಶ್ರೀನಿವಾಸ (28) ಎಂದು ಗುರುತಿಸಲಾಗಿದೆ. ಕೂಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಶ್ರೀನಿವಾಸ ಸೋಮವಾರ ಸಂಜೆಯಿಂದ ನಾಪತ್ತೆಯಾಗಿದ್ದನು. ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ.
ಮಂಗಳವಾರ ಮುಂಜಾನೆ ಅವರ ಶವ ತೋಟದಲ್ಲಿನ ಕೆರೆಯಲ್ಲಿ ಪತ್ತೆಯಾಯಿತು. ಆತ್ಮಹತ್ಯೆಯ ಕಾರಣ ಇನ್ನೂ ತಿಳಿದುಬಂದಿಲ್ಲ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
