ಬಂಟ್ವಾಳ; ಲಾರಿ ಓಡಿಸುತ್ತಿದ್ದಾಗಲೇ ಚಾಲಕನಿಗೆ ಮೂರ್ಛೆ ರೋಗ ಕಾಣಿಸಿಕೊಂಡು ಲಾರಿಯೊಂದು ಡಿವೈಡರ್ ಏರಿದ ಘಟನೆ ರಾ.ಹೆ.75ರ ತುಂಬೆ ಸಮೀಪ ನಡೆದಿದೆ.
ಚಾಲಕನಿಗೆ ಮೂರ್ಛೆ ರೋಗ ಕಾಣಿಸಿಕೊಂಡ ಪರಿಣಾಮ ಲಾರಿ ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದೆ. ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಲಾರಿ ಬೆಂಗಳೂರಿನಿಂದ ಮಂಗಳೂರಿಗೆ ಚಲಿಸುತ್ತಿತ್ತು ಎನ್ನಲಾಗಿದೆ. ಡಿವೈಡರ್ ಮೇಲೆ ಅಳವಡಿಸಿದ್ದ ರಸ್ತೆ ಸೂಚನಾ ಫಲಕಕ್ಕೆ ಹಾನಿಯಾಗಿರುವುದು ಬಿಟ್ಟರೆ ಉಳಿದಂತೆ ಯಾವುದೇ ಹಾನಿ ಉಂಟಾಗಿಲ್ಲ.
