ರಿಯಾದ್: 2025ರ ಹಜ್ ಯಾತ್ರೆಗೆ ಗಮನಾರ್ಹ ಬದಲಾವಣೆಗಳನ್ನು ಮಾಡಿರುವ ಸೌದಿ ಅರೇಬಿಯಾ, ಮಕ್ಕಳ ಮೇಲೆ ನಿಷೇಧ ಹಾಗೂ ವೀಸಾ ನಿರ್ಬಂಧಗಳು ಸೇರಿದಂತೆ ಹಲವು ಬದಲಾವಣೆಗಳನ್ನು ಜಾರಿಗೊಳಿಸಿದೆ.
ಈ ವಾರ್ಷಿಕ ಯಾತ್ರೆಯ ಸಂದರ್ಭದಲ್ಲಿ ಏರ್ಪಡುವ ಜನದಟ್ಟಣೆಯ ಹಿನ್ನೆಲೆಯಲ್ಲಿ ಮಕ್ಕಳನ್ನು ರಕ್ಷಿಸಲು ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಹಜ್ ಮತ್ತು ಉಮ್ರಾ ಸಚಿವಾಲಯ ಹೇಳಿದೆ.
ಮಕ್ಕಳನ್ನು ಜನದಟ್ಟಣೆಯ ಅಪಾಯದಿಂದ ರಕ್ಷಿಸಲು ಹಾಗೂ ಯಾತ್ರೆಯ ಅನುಭವವನ್ನು ಮತ್ತಷ್ಟು ಸೀಮಾತೀತಗೊಳಿಸಲು ಹಜ್ ಯಾತ್ರೆಗೆ ಮಕ್ಕಳನ್ನು ನಿಷೇಧಿಸಲಾಗಿದೆ. ಅಪಾಯಕಾರಿ ಸನ್ನಿವೇಶಗಳಲ್ಲಿ ಭಾರಿ ಜನಜಂಗುಳಿಯನ್ನು ನಿಯಂತ್ರಿಸಬೇಕಾಗುವುದರಿಂದ ಹಜ್ ಸಂದರ್ಭದಲ್ಲಿ ಸಣ್ಣ ಮಕ್ಕಳು ಗಂಭೀರ ಅಪಾಯಕ್ಕೊಳಗಾಗುವ ಸಾಧ್ಯತೆ ಇದೆ ಎಂದು ಸಚಿವಾಲಯಒತ್ತಿ ಹೇಳಿದೆ.
