ಬೆಳ್ತಂಗಡಿ: ಯೂತ್ ಕಾಂಗ್ರೆಸ್ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಪ್ರಮುಖ ಸ್ಥಾನಕ್ಕೆ ಹೊಸ ನೇಮಕಾತಿ ನಡೆದಿದೆ. ಯುವ ಮುಖಂಡ ವಾಜಿದ್ ಕೊಕ್ಕಡ ಅವರು ಸಮಾಜಸೇವೆಗಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಅಧಿಕೃತವಾಗಿ ನೇಮಕಗೊಂಡಿದ್ದಾರೆ.
ಪಕ್ಷದ ಸಂಘಟನೆಯಲ್ಲಿ ತಮ್ಮ ಸಕ್ರಿಯತೆಯ ಮೂಲಕ ಗಮನ ಸೆಳೆದ ವಾಜಿದ್, ಸ್ಥಳೀಯ ಯುವಜನತೆ ಮತ್ತು ಪಕ್ಷದ ಹಿತಾಸಕ್ತಿಗಳಿಗೆ ಮುಂಚೂಣಿಯಲ್ಲಿ ನಿಂತು ಕೆಲಸ ಮಾಡುತ್ತಿದ್ದರು.
ನೂತನ ಕಾರ್ಯದರ್ಶಿಯಾಗಿ ವಾಜಿದ್ ಕೊಕ್ಕಡ,ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಯುವ ಶಕ್ತಿ ಮತ್ತು ಸಾಮರ್ಥ್ಯವನ್ನು ಸಂಘಟಿತಗೊಳಿಸಿ, ಸಮುದಾಯದ ಉನ್ನತಿಗಾಗಿ ಶ್ರಮಿಸುತ್ತೇನೆ," ಎಂದು ತಮ್ಮ ಪ್ರತಿಕ್ರಿಯೆಯಲ್ಲಿ ತಿಳಿಸಿದ್ದಾರೆ.

