ಬೆಳ್ತಂಗಡಿ : ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ನಿಧನವಾಗಿರುವ ಘಟನೆ ತೋಟತ್ತಾಡಿ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ನಿವಾಸಿ ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿ ಜಯರಾಮ (19) ರವರಿಗೆ ಹೃದಯಾಘಾತ ಸಂಭವಿಸಿದ್ದು ಇಂದು(ಫೆ.17) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಇವರು ಬೆಳ್ತಂಗಡಿ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದರು. ಜ. 22 ರಂದು ಬೆಳಿಗ್ಗೆ ಏಕಾಏಕಿ ಹೃದಯಾಘಾತ ಸಂಭವಿಸಿದ್ದು ಬ್ರೈನ್ ಸ್ಟೋಕ್ ಕೂಡ ಸಂಭವಿಸಿತ್ತು ಈ ವೇಳೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಜಯರಾಮ ರವರು ಚಿಕಿತ್ಸೆ ಫಲಾಕಾರಿಯಾಗದೆ ಫೆ.17 ರಂದು ನಿಧನರಾಗಿದ್ದಾರೆ.
