ಸುಳ್ಯ :ಕೆ.ವಿ.ಜಿ. ಡೆಂಟಲ್ ಕಾಲೇಜ್ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ - News Ubaar

ಇತ್ತೀಚಿನ ಸುದ್ದಿ

Subscribe

ಬುಧವಾರ, ಫೆಬ್ರವರಿ 26, 2025

ಸುಳ್ಯ :ಕೆ.ವಿ.ಜಿ. ಡೆಂಟಲ್ ಕಾಲೇಜ್ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ


ಸುಳ್ಯ: ಸುಳ್ಯದ ಕೆವಿಜಿ ದಂತ ಮಹಾವಿದ್ಯಾಲಯದ ಬಿಡಿಎಸ್‌ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ವರದಿಯಾಗಿದೆ.


ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಕೃತಿಕಾ (ಬಿಜಾಪುರ) ಮೂಲದವಳಾಗಿದ್ದು, ಈ ದುರ್ಘಟನೆಗೆ ಪುತ್ತೂರಿನ ಪಾಲಿಟೆಕ್ನಿಕ್ ವಿದ್ಯಾರ್ಥಿಯ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಕುರಿತು ಮಾಹಿತಿ ದೊರಕುತ್ತಿದ್ದಂತೆ ಸುಳ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಪ್ರಾರಂಭಿಸಿದ್ದಾರೆ.


ಸ್ಥಳೀಯರು ಮತ್ತು ವಿದ್ಯಾರ್ಥಿ ಸಮುದಾಯ ಈ ಘಟನೆಗೆ ತೀವ್ರ ಆಘಾತ ವ್ಯಕ್ತಪಡಿಸಿದ್ದು, ಪ್ರಕರಣದ ಬಗ್ಗೆ ಪೊಲೀಸರ ವಿಸ್ತೃತ ತನಿಖೆ ನಿರೀಕ್ಷಿಸಲಾಗಿದೆ. ಆತ್ಮಹತ್ಯೆ ಹಿಂದಿನ ಕಾರಣಗಳ ಬಗ್ಗೆ ಇನ್ನಷ್ಟು ವಿವರಗಳು ಬಹಿರಂಗವಾಗಬೇಕಾಗಿದೆ.

Pages