ಬಂಟ್ವಾಳ : ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡಿನ ಸರ್ಕಲ್ ಬಳಿ ಮಾರ್ಚ್ 5ರಂದು ಖಾಸಗಿ ಬಸ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಕಾರು ಚಾಲಕ ವಿಶ್ವನಾಥ ಶೆಟ್ಟಿ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಾಥಮಿಕ ಮಾಹಿತಿಯಂತೆ, ಕೇರಳ ಮೂಲದ ವಿಶ್ವನಾಥ ಶೆಟ್ಟಿ ಅವರು ಬಿಸಿರೋಡಿನಿಂದ ಮೆಲ್ಕಾರ್ ಕಡೆಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ, ವಿರುದ್ಧ ದಿಕ್ಕಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಬಸ್ ಚಾಲಕನ ನಿರ್ಲಕ್ಷ್ಯ ಮತ್ತು ನಿಯಮ ಮೀರಿದ ಓಟವೇ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಘಟನೆ ನಂತರ ಸ್ಥಳೀಯರು ತಕ್ಷಣವೇ ಗಂಭೀರವಾಗಿ ಗಾಯಗೊಂಡ ಕಾರು ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿದರು. ಅಪಘಾತದ ಪರಿಣಾಮ, ಕಾರು ಸಂಪೂರ್ಣ ಜಖಂಗೊಂಡಿದ್ದು, ಪರಿಸ್ಥಿತಿಯ ಗಂಭೀರತೆಯಿಂದ ಸ್ಥಳೀಯರು ಆತಂಕಕ್ಕೊಳಗಾಗಿದ್ದಾರೆ.


