ಬೆಂಗಳೂರು: ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅವರ 2012ರ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಕುರಿತಾಗಿ ಯೂಟ್ಯೂಬರ್ 'ದೂತ ಸಮೀರ್' ಅವರು ಬಿಡುಗಡೆ ಮಾಡಿದ ವಿಡಿಯೋ ಹಿನ್ನೆಲೆಯಲ್ಲಿ, ರಾಜ್ಯ ಪೊಲೀಸ್ ಮಹಾನಿರ್ದೇಶಕರು (DGP) ರಾಜ್ಯಾದ್ಯಂತ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ನಿಗಾ ಹೆಚ್ಚಳಕ್ಕೆ ಆದೇಶಿಸಿದ್ದಾರೆ.
ಬುಧವಾರ ಫ್ಯಾಕ್ಸ್ ಮೂಲಕ ಎಲ್ಲಾ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ (SP) ರವಾನಿಸಿದ ಸಂದೇಶದಲ್ಲಿ, 'ದೂತ ಸಮೀರ್' ಅವರ ವಿಡಿಯೋ ಸಾರ್ವಜನಿಕರಲ್ಲಿ ಪರ, ವಿರೋಧ ಪ್ರತಿಕ್ರಿಯೆಗಳನ್ನು ಹುಟ್ಟುಹಾಕಿದ್ದು, ಇದು ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಯಿದೆ ಎಂದು ಸೂಚಿಸಲಾಗಿದೆ.
ಈ ಹಿನ್ನೆಲೆಯಲ್ಲಿ, ಎಲ್ಲಾ ಘಟಕಾಧಿಕಾರಿಗಳು ತಕ್ಷಣ ಕಾರ್ಯಪ್ರವೃತ್ತರಾಗಿ ಸಾಮಾಜಿಕ ಮಾಧ್ಯಮ ಮೇಲ್ವಿಚಾರಣಾ ಸೆಲ್‌ಗಳನ್ನು ಚುರುಕುಗೊಳಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಹಾಕಲಾಗುವ ಪೋಸ್ಟ್‌ಗಳ ಮೇಲೆ ನಿಗಾ ಇಟ್ಟು, ಕೈಗೊಳ್ಳುವ ಕ್ರಮಗಳ ಬಗ್ಗೆ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ

