ಉಡುಪಿ: ಮಣಿಪಾಲದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗಿರುವ ಗರುಡ ಗ್ಯಾಂಗ್‌ನ ಇಸಾಕ್‌ನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಈ ಸಂಬಂಧ ಪೊಲೀಸರು ಎಲ್ಲ ಆಯಾಮಗಳಲ್ಲಿಯೂ ತನಿಖೆ ಮುಂದುವರಿಸಿದ್ದು, ಆತನ ಸುಳಿವು ಪಡೆಯಲು ಶ್ರಮಿಸುತ್ತಿದ್ದಾರೆ.
ಈ ಪ್ರಕರಣದಲ್ಲಿ ಈಗಾಗಲೇ ಆರೋಪಿಯ ಪ್ರೇಯಸಿ ಮತ್ತು ಆಕೆಯ ತಾಯಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದಲ್ಲದೆ, ಶುಕ್ರವಾರ ಆರೋಪಿಯ ಕುಟುಂಬಸ್ಥರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ದರೋಡೆ ಪ್ರಕರಣದಲ್ಲಿ ಇನ್ನಷ್ಟು ಮಂದಿಯನ್ನು ಬಂಧನಕ್ಕೊಳಪಡಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸುತ್ತಿವೆ.
ಸುಜೈನ್‌ಗೆ 14 ದಿನಗಳ ನ್ಯಾಯಾಂಗ ಬಂಧನ
ಮಣಿಪಾಲ ಪೊಲೀಸ್ ಕಸ್ಟಡಿಯಲ್ಲಿದ್ದ ಮತ್ತೊಬ್ಬ ಆರೋಪಿ ಸುಜೈನ್‌ಳನ್ನು ಶುಕ್ರವಾರ ಮಣಿಪಾಲ ಪೊಲೀಸರು ಎರಡನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಎಸಿಜೆಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ವಿಚಾರಣೆ ಬಳಿಕ ನ್ಯಾಯಾಲಯವು ಆತನಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಪೊಲೀಸರು ಇನ್ನೂ ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದು, ಇಸಾಕ್‌ನ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಿ ತನಿಖೆ ಮುಂದುವರಿಸಿದ್ದಾರೆ

