ಪುತ್ತೂರು, ರಾಗಿದಕುಮೇರ್ ಬಳಿಯ ಅಂದ್ರಟ್ಟ ಎಂಬಲ್ಲಿ ದಾರಿ ಕೇಳುವ ನೆಪದಲ್ಲಿ ಮನೆಯವರ ಕೈಯಲ್ಲಿದ್ದ ಚಿನ್ನದ ಉಂಗುರ ಎಳೆದು ಪರಾರಿಯಾದ ಘಟನೆ ನಡೆದಿದೆ.
ರಾತ್ರಿ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ದಾರಿ ಕೇಳಲು ಬಂದಿದ್ದು, ದಾರಿ ತೋರಿಸಲು ಬಂದ ವ್ಯಕ್ತಿಯ ಕೈಯಲ್ಲಿ ಇದ್ದ ಚಿನ್ನದ ಉಂಗುರವನ್ನು ಕಿತ್ತುಕೊಂಡು ಬೈಕ್‌ನಲ್ಲಿ ವೇಗವಾಗಿ ಪರಾರಿಯಾಗಿದೆ.
ಘಟನೆಯ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಪುತ್ತೂರು ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಈ ಭಾಗದಲ್ಲಿ ದಾರಿ ಕೇಳುವ ನೆಪದಲ್ಲಿ ಕಳ್ಳತನ ನಡೆಸುವ ಪ್ರಕರಣಗಳು ಹೆಚ್ಚುತ್ತಿರುವುದರಿಂದ, ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಪೊಲೀಸರು ಮನವಿ ಮಾಡಿದ್ದಾರೆ.

